ಶ್ರವಣಬೆಳಗೊಳದಲ್ಲಿ ಮಾಂಸ ಮಾರಾಟ ನಿಷೇಧಿಸಬೇಕು: ರಾಜ್ಯಪಾಲ ಗೆಹ್ಲೋಟ್

ಹಾಸನ: ಶ್ರವಣಬೆಳಗೊಳ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿದ್ದು ಇಲ್ಲಿ ಮಾಂಸ ಮಾರಾಟದ ಅಂಗಡಿಗಳಿಗೆ ನಿಷೇಧ ಹೇರಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲ್ಲೋಟ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಶ್ರವಣಬೆಳಗೊಳ ಜೈನಮಠದಲ್ಲಿ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರರ ಜನ್ಮ ಕಲ್ಯಾಣೋತ್ಸವದಲ್ಲಿ ಮಾತನಾಡಿದರು.

ಜೈನ ಧರ್ಮ ಅಹಿಂಸೆ ಪ್ರತಿಪಾದಿಸುತ್ತೆ. ಇನ್ನೊಬ್ಬರಿಗೆ ಹಿಂಸೆ ಮಾಡಬಾರದು. ಆದರೆ ಕ್ಷೇತ್ರದ ಸುತ್ತಲು ಮಾಂಸದಂಗಡಿ ಹಾಗೂ ಮದ್ಯದ ಅಂಗಡಿಗಳು ಹೆಚ್ಚಿವೆ ಎಂಬ ಆತಂಕ ವ್ಯಕ್ತವಾಗಿದೆ. ಸರ್ಕಾರ ಈ ಸಮಸ್ಯೆ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸರ್ಕಾರದ ಜತೆ ಮಾತನಾಡುವಂತೆ ಸಚಿವ ಡಿ. ಸುಧಾಕರ್ ಅವರಿಗೂ ಸೂಚಿಸಿದರು.

ಆಹಾರ ಪದಾರ್ಥದಲ್ಲಿ ನಾವು ಕಟ್ಟುನಿಟ್ಟು ಪಾಲಿಸುತ್ತೇವೆ. ಸನಾತನ ಧರ್ಮಕ್ಕು ಜೈನ ಧರ್ಮಕ್ಕು ಆಹಾರದಲ್ಲಿ ಸಾಮ್ಯತೆ ಇದೆ. ನಾವು ರಾಜಭವನಕ್ಕೆ ಯಾರೇ ಬಂದರು ಶಾಖಾಹಾರ ಊಟವನ್ನೇ ನೀಡುತ್ತೇವೆ ಎಂದರು.