ಜಿ. ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲು; ದೂರು ಕೊಟ್ಟವರು ಡಿಸಿ!

ಹಾಸನ: ಬಿಜೆಪಿ ಮುಖಂಡ, ವಕೀಲ ಜಿ. ದೇವರಾಜೇಗೌಡ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಹೌದು, ದೇವರಾಜೇಗೌಡ ಅವರು ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಮಂಗಳವಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು.

ಅದರಂತೆ ನಗರ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 353 ರ ಅನ್ವಯ, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಮಾ.14ರಂದು ತಮ್ಮ ಕಚೇರಿಗೆ ಬಂದಿದ್ದ ಜಿ.ದೇವರಾಜೇಗೌಡ ವಿನಾಕಾರಣ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಪಿಸಿದ್ದಾರೆ.