ಹಾಸನ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ಆತಂಕದ ಅಲೆ ಸೃಷ್ಟಿಸಿದ್ದು ಕರೊನಾ JN-1 ರೂಪಾಂತರಿ ತಳಿಗೆ ಭಾನುವಾರ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ.
ಚನ್ನರಾಯಪಟ್ಟಣ ಮೂಲದ ವ್ಯಕ್ತಿ ಕೋವಿಡ್ ನಿಂದ ಮೃತಪಟ್ಟಿದ್ದು, ಈತ ಮೊದಲೇ ಇತರ ರೋಗಗಳಿಂದ ಬಾಧಿತನಾಗಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆತನ ಸಾವಿನ ನಂತರ ತನಿಖೆ ನಡೆಸಲು ಗಂಟಲು ದ್ರವವನ್ನು ತಳಿಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಆತನಲ್ಲಿ ಕೋವಿಡ್ ರೂಪಾಂತರಿ ತಳಿ ಪತ್ತೆಯಾಗಿದೆ.
ಇದಲ್ಲದೆ ಜಿಲ್ಲೆಯಲ್ಲಿ ಶೀತ, ಜ್ವರ ಬಾಧಿತರಾಗಿರುವ ಐವರು ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. ಒಬ್ಬಾತ ಮೃತಪಟ್ಟಿದ್ದು ನಾಲ್ವರು ಹೋಂ ಐಸೋಲೇಷನ್ ನಲ್ಲಿದ್ದಾರೆ.
ಸಾರ್ವಜನಿಕರು ಭಯಪಡುವ ಅಗತ್ಯ ಇಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.