ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ “ಫೆಂಗಾಲ್” ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಳಿಸುತ್ತಿದ್ದು ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯನ್ನು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಇಂದು ಮಧ್ಯಾಹ್ನ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ.
70-80 kmph ವೇಗವಾಗಿ ಬೀಸುವ ಗಾಳಿ ವೇಗ ಗಂಟೆಗೆ 90 kmph ತಲುಪುವ ಸಾಧ್ಯತೆಯಿದೆ. ಇದರ ಪರಿಣಾಮ, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ಡಿಸೆಂಬರ್ 1 & 2 ರಂದು ಅತಿಭಾರಿ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ಅಲರ್ಟ್ ನೀಡಲಾಗಿದೆ.
ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 3 ರವರೆಗೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.