ಹಾಸನದ ಅಪರಾಧ ಪ್ರಕರಣಗಳಲ್ಲಿ ಯಾವ ಒತ್ತಡಕ್ಕೂ ಮಣಿದಿಲ್ಲ; ಎಲ್ಲರಿಗೂ ಒಂದೇ ಕಾನೂನು ಎಂದ ಗೃಹಸಚಿವ ಜಿ.ಪರಮೇಶ್ವರ್

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು| ಪೊಲೀಸರು ಕೆಲಸ ಮಾಡುತ್ತಿದ್ದಾರೆ

ಹಾಸನ: ಹಾಸನದಲ್ಲಿನ ಅಪರಾಧ ಪ್ರಕರಣಗಳಲ್ಲಿ ಯಾರನ್ನೂ ರಕ್ಷಸದೇ, ಯಾವ ಒತ್ತಡಕ್ಕೂ ಮಣಿಯದೆ ಕ್ರಮ ಕೈಗೊಂಡಿದ್ದೇವೆ.ಎಲ್ಲರಿಗೂ ಇರುವುದು ಒಂದೇ ಕಾನೂನು ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರ ರಾಜ್ಯದಲ್ಲಿ ಶಾಂತಿಯನ್ನು ಬಯಸುತ್ತದೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಅದೇ ಪ್ರಕಾರ ಜನರ ಆಸ್ತಿ, ಜೀವ ರಕ್ಷಣೆ ಆಗಬೇಕು. ಪೊಲೀಸ್ ಇಲಾಖೆ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಗಳಿಗೆ ಸೂಚನೆ ಕೊಟ್ಟಿದ್ದೇನೆ, ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ವಿರೋಧ ಪಕ್ಷದವರು ಕಾನೂನು ವ್ಯವಸ್ಥೆ ಕೆಟ್ಟಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ದಕ್ಷಿಣಕನ್ನಡ, ಶಿವಮೊಗ್ಗ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಕಮ್ಯೂನಲ್ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆಗಳು ನಿಂತು ಹೋಗಿದ್ದಾವೆ. ಈ ಬಗ್ಗೆ ವಿರೋಧ ಪಕ್ಷದವರು ಮಾತನಾಡಲಿ ಎಂದರು.

ಅಪರಾಧ ನಿಯಂತ್ರಣ ನಮ್ಮ ಜವಾಬ್ದಾರಿಯಾಗಿದೆ. ಯಾರನ್ನೋ ಮೆಚ್ಚಲಿಸಕ್ಕೆ, ಅಪರಾಧ ಪ್ರಕರಣಗಳ ಅಂಕಿ-ಅಂಶ ಕಡಿಮೆ ಮಾಡುವುದು ಮುಖ್ಯ ಅಲ್ಲ. ಇಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದರು.