ಹಾಸನ: ವಿದ್ಯುತ್ ತಂತಿ ತಗುಲಿ ಕಬ್ಬಿನ ಗದ್ದೆಯಲ್ಲಿ ಬೆಂಕಿ ಹೊತ್ತಿಕೊಂಡು ಕಟಾವಿಗೆ ಸಿದ್ಧವಾಗಿದ್ದ ಬೆಳೆ ಅಗ್ನಿಗಾಹುತಿಯಾದ ಘಟನೆ ಶಾಂತಿಗ್ರಾಮ ಹೋಬಳಿ, ಬೆಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಚಿಕ್ಕೇಗೌಡ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಂಕಿಯಲ್ಲಿ ಸುಟ್ಟು ಹೋಗಿ ರೈತ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕಬ್ಬಿನ ಗದ್ದೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಕಬ್ಬು ತಾಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿನಂದಿಸಲು ಸ್ಥಳೀಯರು ಸಾಕಷ್ಟು ಪ್ರಯತ್ನ ಮಾಡಿದರೂ ಬೆಳೆ ಬೆಂಕಿಗೆ ಆಹುತಿಯಾಗಿದೆ.