ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ

ಹಾಸನ: ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆದಿದೆ.

ಡಿ.ಆರ್.ಮೋಹನ್‌ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ವಿಎ. ಅವರು ನಾಗೇಶ್ ಎಂಬವರಿಂದ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ಶಿಲ್ಪಾ ಹಾಗೂ ಬಾಲು ಅವರ ತಂಡದ ಬಲೆಗೆ ಬಿದ್ದಿದ್ದಾರೆ.

ಸಕಲೇಶಪುರ ತಾಲ್ಲೂಕಿನ, ಹೆತ್ತೂರು ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಮೋಹನ್‌ಕುಮಾರ್, ಜಮೀನು ಮಂಜೂರಾತಿ ಹಾಗೂ ಸ್ಥಳ ಪರಿಶೀಲನೆಗಾಗಿ 25000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ನಾಗೇಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದನ್ನಾಧರಿಸಿ ಲೋಕಾಯುಕ್ತ ತಂಡ ಬಲೆ ಹೆಣೆದಿತ್ತು.