ಹಾಸನ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ಜೆ.ಸುರಪುರ ಗ್ರಾಮದಲ್ಲಿ ನಡೆದಿದೆ.
ಮಲ್ಲಿಕಾರ್ಜುನ (58) ಸಾವನ್ನಪ್ಪಿದ ವ್ಯಕ್ತಿ. ಆ.13 ರಂದು ಬೈಕ್‌ನಲ್ಲಿ ಜಮೀನಿಗೆ ಗೊಬ್ಬರ ತೆಗೆದುಕೊಂಡು ಹೋಗುತ್ತಿದ್ದ ಮಲ್ಲಿಕಾರ್ಜುನ ಅವರ ಮೇಲೆ ಏಕಾಏಕಿ ದಾಳಿ ಮಾಡಿದ್ದ ಕಾಡಾನೆ ಸೊಂಡಿಲಿನಿಂದ ಎಸೆದು, ತುಳಿದು ಗಾಯಗೊಳಿಸಿತ್ತು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಅವರು ಸ್ಪಂದಿಸದಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮನೆಗೆ ಕರೆತರಲಾಗಿತ್ತು.