ಹಾಸನ: ಮಲೆನಾಡು ಪ್ರದೇಶದಲ್ಲಿ ಕಾಡಾನೆಗಳ ಉಪಟಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳಿಗೆ ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ.
ಸ್ಥಳೀಯ ಶಾಸಕ ಎಚ್.ಕೆ. ಸುರೇಶ್ ಅವರು ಸಾಕಾನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಾಚರಣೆಗೆ ಚಾಲನೆ ನೀಡಿದರು. ಈ ಮಹತ್ವದ ಕಾರ್ಯಾಚರಣೆಯನ್ನು ಸಾಕಾನೆ ಭೀಮನ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯಲ್ಲಿ ಏಕಲವ್ಯ, ಶ್ರೀರಾಮ, ಲಕ್ಷ್ಮಣ, ಕಂಜನ್, ಈಶ್ವರ ಸೇರಿದಂತೆ ಆರು ಸಾಕಾನೆಗಳು ಭಾಗವಹಿಸುತ್ತಿವೆ.
ಮೊದಲ ಹಂತದಲ್ಲಿ, ಓಲ್ಡ್ ಬೆಲ್ಟ್ ಗುಂಪಿನ ಹೆಣ್ಣಾನೆಗೆ ರೆಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಈ ತಂತ್ರಜ್ಞಾನದ ಮೂಲಕ ಕಾಡಾನೆಗಳ ಚಲನ-ವಲನವನ್ನು ನಿಖರವಾಗಿ ಗ್ರಹಿಸಿ, ಅಪಾಯವನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ.