ಬೆಂಗಳೂರು: ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯದರು.
ರೇವಣ್ಣ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳು, ಅವಧಿ ಮುಗಿದಿದ್ದರಿಂದ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ