ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ.ಎಚ್.ವೇಣುಕುಮಾರ್

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ಎಚ್.ವೇಣುಕುಮಾರ್ ಅಧಿಕಾರ ಸ್ವೀಕರಿಸಿದರು.

ಸಂಘದ ನಿರ್ಗಮಿತ ಅಧ್ಯಕ್ಷ ಬಾಳ್ಳುಗೋಪಾಲ್, ವೇಣುಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ವೇಣುಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಪತ್ರಕರ್ತರ ಸಂಘದ ಪತ್ರಕರ್ತರ ಏಳಿಗೆ, ಕ್ಷೇಮಾಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ನಿರ್ಗಮಿತ ಅಧ್ಯಕ್ಷ ಬಾಳ್ಳುಗೋಪಾಲ್ ಮಾತನಾಡಿ, ನನ್ನ ಅವಧಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸಿದ ತೃಪ್ತಿ ಇದೆ. ವೇಣುಕುಮಾರ್ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಸಹಕಾರ ನೀಡುತ್ತೇನೆ ಎಂದು ಶುಭ ಹಾರೈಸಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ.ಮದನಗೌಡ, ವಿಶೇಷ ಆಹ್ವಾನಿತ ರವಿನಾಕಲಗೂಡು, ಪ್ರಧಾನ ಕಾರ್ಯದರ್ಶಿ ಮಂಜು ಬನವಾಸೆ, ರಾಷ್ಟ್ರೀಯ ಮಂಡಳಿ ಸದಸ್ಯ ಜಿ.ಪ್ರಕಾಶ್, ಕಾರ್ಯದರ್ಶಿ ನಟರಾಜ್, ಖಜಾಂಚಿ ಕುಮಾರ್ ಮುಂತಾದವರಿದ್ದರು.