ಹಾಸನಕ್ಕೆ ಹೋಗ್ತೀನಿ ಪ್ರಜ್ವಲ್ ಸೋಲಿಸುತ್ತೇನೆ; ಗುಡುಗಿದ ಸಿಎಂ ಸಿದ್ದರಾಮಯ್ಯ

ಕಳೆದ ಬಾರಿ ನಾನು ಹೋಗಿದ್ದಕ್ಕೇ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು.

ಮೈಸೂರು: ಕಳೆದ ಬಾರಿ ನಾನು ಹೋಗಿದ್ದಕ್ಕೇ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು. ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ. ಪ್ರಜ್ವಲ್ ನನ್ನು ಸೋಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಸೋಲಿಸಲೇಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ. ಪ್ರಜ್ವಲ್ ಸೋಲುತ್ತಾನೆ ಎಂದರು.

ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ. ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಗನನ್ನು ನಿಲ್ಲಿಸುವಾಗ ಯಾರ ಇಚ್ಚೆ ಇತ್ತು. ಈಗ ದೇವರು ಎಂದರೆ ಆಗ ಯಾರಿದ್ದರು? ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ.

ಈ ಬಾರಿ ಜೆಡಿಎಸ್ ನವರು ಮೂರಕ್ಕೆ ಮೂರು ಕ್ಷೇತ್ರದಲ್ಲೂ ಸೋಲುತ್ತಾರೆ. ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ? ಎಂದು ಖಾರವಾಗಿ ಪ್ರಶ್ನಿಸಿದರು.

ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದ್ದಾರೆ ಎಂದರೆ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ ಎಂದು ಪ್ರಶ್ನಿಸಿದರು.