ಹಾಸನ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಹಾಗೂ ಬಿಜೆಪಿ ಮುಖಂಡ ಜಿ. ದೇವರಾಜೇಗೌಡಗೆ ಮೇ. 24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಹೊಳೆನರಸೀಪುರ ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ನಿನ್ನೆ ರಾತ್ರಿ ಹಿರಿಯೂರು ಸಮೀಪ ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದ ದೇವರಾಜೇಗೌಡ ಅವರನ್ನು ಹೊಳೆನರಸೀಪುರಕ್ಕೆ ಕರೆತಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತಾ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಿಚಾರಣೆ ನಡೆಸಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿತ್ತು.
ವಶಕ್ಕೆ ಪಡೆದ 24 ಗಂಟೆಗಳ ಒಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದ್ದರಿಂದ ಸಂಜೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಜೆಎಂಎಫ್‌ಸಿ ನ್ಯಾಯಾಧೀಶ ಸಿದ್ದರಾಮ್.ಎಸ್ ಅವರೆದುರು ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯನ್ನು ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.