ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಹಾರ ನಿರೀಕ್ಷಕ ಜಗನ್ನಾಥ್ ಹಾಗೂ ಅವರ ಸಹೋದರ, ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ಅವರ ಮಾಸ್ಟರ್ಸ್ ಕಾಲೇಜು ಬಳಿಯ ಐಷಾರಾಮಿ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಜಗನ್ನಾಥ್ ಅಕ್ರಮವಾಗಿ ಗಳಿಸಿರುವ ಹಣವನ್ನು ಸಹೋದರನ ಮೂಲಕ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿದ್ದಾರೆ ಎನ್ನುವ ಶಂಕೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್ಸ್‌ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ.