ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಎಂ.ಡಿ.ನಾಗೇಶ್ ನೇಮಕ

ಹಾಸನ: ಕನ್ನಡ ಸಾಹಿತ್ಯ ಪರಿಷತ್ತಿನ ಹಾಸನ ಜಿಲ್ಲಾ ಘಟಕದ ಸಹ ಕಾರ್ಯದರ್ಶಿಯಾಗಿ ಎಂ.ಡಿ. ನಾಗೇಶ್  ಅವರನ್ನು ನೇಮಕ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಹೋಬಳಿ ಮಾಚಬೂವನಹಳ್ಳಿ ಗ್ರಾಮದ ನಾಗೇಶ್ ಅವರು ಸೆಸ್ಕ್ ನ ಕಾರ್ಯನಿರ್ವಾಹಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾಂಸ್ಕ್ರತಿಕ, ಸಾಹಿತ್ಯಿಕ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿರುವ ನಾಗೇಶ್ ಅವರು ವೃತ್ತಿಯೊಟ್ಟಿಗೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡವರಾಗಿದ್ದಾರೆ. ಅವರು ಈ ಹಿಂದೆ ರೋಟರಿ ಕ್ಲಬ್ ಆಫ್ ಕ್ವಾಂಟಾದಲ್ಲಿ ಪದಾಧಿಕಾರಿಯಾಗಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.