ರೇಣುಕಾಸ್ವಾಮಿ ಹತ್ಯೆ ಖಂಡಿಸಿ ವೀರಶೈವ ಲಿಂಗಾಯತ ಸಮಾಜದಿಂದ ಪ್ರತಿಭಟನೆ

ವಿವಿಧ ಮಠಾಧೀಶರು ಭಾಗಿ| ಡಿಸಿ ಸಿ.ಸತ್ಯಭಾಮಗೆ ಮನವಿ ಸಲ್ಲಿಕೆ

ಹಾಸನ: ಚಿತ್ರನಟ ದರ್ಶನ್ ಆರೋಪಿಯಾಗಿರುವ ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಹಾಸನದಲ್ಲಿ ವೀರಶೈವ ಲಿಂಗಾಯತ ಸಮಾಜದ ಸದಸ್ಯರು ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾಕಾರರು ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಕೊಲೆಗಡುಕ ದರ್ಶನ್ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೇಣುಕಾಸ್ವಾಮಿಯನ್ನು ಅಮಾನುಷವಾಗಿ ಕೊಂದ ದರ್ಶನ್‌ನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ, ತಣ್ಣೀರುಹಳ್ಳ ಮಠದ ವಿಜಯಕುಮಾರ ಸ್ವಾಮೀಜಿ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಕಟ್ಟಾಯ ಶಿವಕುಮಾರ್, ರುದ್ರಕುಮಾರ್, ಶೋಭನ್ ಬಾಬು, ಹೇಮಂತ್, ಲತೇಶ್, ಬಿ.ಎ.ನಾಗೇಶ್ ಮುಂತಾದವರು ಭಾಗಿಯಾಗಿದ್ದರು.