ಅಂಬೇಡ್ಕರ್ ತತ್ವ-ಆದರ್ಶಗಳನ್ನು ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್

ಹಾಸನ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ಅಂಬೇಡ್ಕರ್  ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ-ಆದರ್ಶಗಳನ್ನು ಪಾಲಿಸೋಣ ಎಂದು ಶಾಸಕ ಸ್ವರೂಪ ಪ್ರಕಾಶ್ ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 63ನೇ ಪರಿನಿರ್ವಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಭಾರತ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ವಿಶ್ವಕ್ಕೆ ಮಾದರಿ ಯಾಗಿರುವ ಅಂಬೇಡ್ಕರ್ ಅವರು ಮಹಿಳೆಯರಿಗೆ, ದೀನ ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿ ಕೊಟ್ಟಿದ್ದಾರೆ.

ಬದುಕಿನುದ್ದಕ್ಕೂ ಎಲ್ಲರಿಗೂ ಸಮಾನತೆ ಕಲ್ಪಿಸಿಕೊಡಲು ಹೋರಾಟ ಮಾಡಿದ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊನೆಯ ದಿನಗಳಲ್ಲಿ ಈ ಹಿಂದೂ ಧರ್ಮ ತೇಜಿಸಿ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದ ಬೌದ್ಧ ಧರ್ಮ ಸ್ವೀಕಾರ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

ಈ ವೇಳೆ ಜೆಡಿಎಸ್ ವಕ್ತಾರ ಹೊಂಗೆರೆ ರಘು, ದಸಂಸ ಮುಖಂಡ ಕೃಷ್ಣದಾಸ್, ಅರುಣ್ ಜಯರಾಮ್ , ಮಂಜು, ತೇಜೂರು ಮಂಜು, ಉಮೇಶ್, ಇತರರು ಇದ್ದರು.