ಸೂರಜ್ ರೇವಣ್ಣ ಬಂಧನ; ಹಾಸನದ ಸೆನ್ ಠಾಣೆಯಲ್ಲೇ ವಶಕ್ಕೆ ಪಡೆದ ಪೊಲೀಸರು

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ಅವರ ಬಂಧನವಾಗಿದೆ.

ನಿನ್ನೆ ರಾತ್ರಿಯಿಂದ ಸಿಇಎನ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಒಂದೆಡೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿರುವಾಗಲೇ ಅವರ ಅಣ್ಣ ಡಾ.ಸೂರಜ್ ಬಂಧನವಾಗಿದ್ದು ರೇವಣ್ಣ ಇಬ್ಬರು ಪುತ್ರರೂ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವಂತಾಗಿದೆ.