ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಂಸದ ಶ್ರೇಯಸ್ ಪಟೇಲ್

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಸಂಸದ ಶ್ರೇಯಸ್ ಎಂ‌. ಪಟೇಲ್ ಅಧ್ಯಕ್ಷತೆಯಲ್ಲಿ ಗುರುವಾರ ಗೊರೂರಿನ ಹೇಮಾವತಿ ಪ್ರವಾಸಿ ಮಂದಿರದಲ್ಲಿ ಜರುಗಿತು.

ಈ ವರ್ಷ ಸಮರ್ಪಕವಾಗಿ ಮಳೆಯಾಗಿರುವುದರಿಂದ, ರೈತಾಪಿ ವರ್ಗದವರಿಗೆ ಬೆಳೆ ಬೆಳೆಯಲು ಅನುಕೂಲವಾಗಿದೆ. ಈ ದೃಷ್ಟಿಯಲ್ಲಿ, ಹೇಮಾವತಿ ಜಲಾಶಯದಲ್ಲಿ ನೀರು ಸಂಗ್ರಹವಾಗಿರುವುದು ನಮ್ಮ ರೈತರಿಗೆ ನೆರವಾಗಲಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.

ಜಲಾಶಯದ ನೀರಿನ ಒಳಹರಿವು, ಲಭ್ಯತೆ ಮತ್ತು ಅಣೆಕಟ್ಟಿನ ನಿರ್ವಹಣೆಯ ಕುರಿತು ಸಂಸದರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರ ಮಂಜುನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಉಪಸ್ಥಿತರಿದ್ದರು.