ಭಾರತದ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ: ಸಂಸದ ಶ್ರೇಯಸ್ ಪಟೇಲ್

ಹಾಸನ: ವಿಶ್ವಕ್ಕೆ ಮಾದರಿಯಾಗಿರುವ ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದೆ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಹೇಳಿದರು.

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಕೊಡಗು ಗಡಿ ಭಾಗದ ಅರಕಲಗೂಡು ತಾಲುಕಿನ ಕಡವಿನ ಹೊಸಳ್ಳಿ ಯಿಂದ ಹಾಸನ ಮಾರ್ಗವಾಗಿ ಬೇಲೂರು ತಾಲೂಕಿನ ಕೈಮರ ವರೆಗೆ ರಚಿಸಲಾಗಿದ್ದ ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ಬಳಿಕ ಅವರು ಮಾತನಾಡಿದರು.

ಭಾರತದ ಪ್ರಜೆಯಾಗಿ ಈ ದಿನ ಹೆಮ್ಮೆ ಪಡುವ ದಿನವಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಜಾತಿ ಬೇಧವಿಲ್ಲದೆ ಎಲ್ಲರೂ ಕೈ – ಕೈ ಹಿಡಿದು ಸಮಾನತೆಯ ಸಂದೇಶ ಸಾರಿದ್ದಾರೆ. ಇದರ ಯಶಸ್ಸಿನ ಹಿಂದೆ ಜಿಲ್ಲಾಡಳಿತದ ಅಧಿಕಾರಿಗಳ ಅಪಾರವಾದ ಶ್ರಮವಿದೆ ಎಂದರು.

ಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮ ಶ್ಲಾಘನೀಯ ಹಾಸನ ಜಿಲ್ಲೆಯಲ್ಲಿ ಅಭೂತಪೂರ್ವ ಯಶಸ್ಸು ಈ ಕಾರ್ಯಕ್ರಮಕ್ಕೆ ಸಿಕ್ಕಿದೆ. ಮಾನವ ಸರಪಳಿಯಲ್ಲಿ ಕೈ ಜೋಡಿಸಿದ ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.