SSLC ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಹಾರೈಸಿದ ಸಂಸದ ಶ್ರೇಯಸ್ ಪಟೇಲ್

ಹಾಸನ: ಸಂಸದ ಶ್ರೇಯಸ್ ಎಂ. ಪಟೇಲ್  ನಗರದ ಗಂಧದ ಕೋಠಿ ಆವರಣದಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, SSLC ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದರು.

 ಪರೀಕ್ಷೆ ಆರಂಭವಾಗುವ ಮುನ್ನ, ಸಂಸದ ಶ್ರೇಯಸ್ ಎಂ ಪಟೇಲ್ ಅವರು ನಗರದ ಗಂಧದ ಕೋಠಿ ಆವರದಲ್ಲಿರುವ ಬಾಲಕಿಯರ/ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪದವಿಪೂರ್ವ ಕಾಲೇಜು (ವಿಭಜಿತ) ಕೇಂದ್ರಗಳಿಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದ ಅವರು, “ನೀವೆಲ್ಲರೂ ಶ್ರಮಪಟ್ಟು ಓದಿದ್ದೀರಿ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ ಮತ್ತು ಉತ್ತಮ ಫಲಿತಾಂಶ ಪಡೆಯಿರಿ” ಎಂದು ಪ್ರೋತ್ಸಾಹಿಸಿದರು. ಪ್ರತಿ ವಿದ್ಯಾರ್ಥಿಗೆ ಗುಲಾಬಿ ಹೂ ನೀಡಿ, ಅವರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಎಂ. ಪಟೇಲ್, “ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ. ಅವರ ಯಶಸ್ಸಿಗೆ ಪ್ರೋತ್ಸಾಹ ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ಹಾಸನ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ, ತಮ್ಮ ಕನಸುಗಳನ್ನು ಸಾಕಾರಗೊಳಿಸಲಿ ಎಂದು ನಾನು ಹಾರೈಸುತ್ತೇನೆ” ಎಂದು ಹೇಳಿದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಆಯೋಜಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4, 2025ರವರೆಗೆ ನಡೆಯಲಿದ್ದು, ರಾಜ್ಯದಾದ್ಯಂತ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ಹಾಸನ್ ಜಿಲ್ಲೆಯಿಂದಲೂ ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಸಂಸದ ಶ್ರೇಯಸ್ ಎಂಪಟೇಲ್ ಅವರ ಈ Gesture ಸ್ಥಳೀಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ವಿದ್ಯಾರ್ಥಿಗಳ ಯಶಸ್ಸಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.