ನವದೆಹಲಿ: ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರು, ವಾಣಿಜ್ಯ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹರಿಸಲು ಕೋರಿ ಸಂಸದ ಶ್ರೇಯಸ್ ಪಟೇಲ್ ಲೋಕಸಭೆ ಆರ್ಥಿಕ ಸ್ಥಾಯಿ ಸಮಿತಿಗೆ ಮನವಿ ಸಲ್ಲಿಸಿದರು.
ಇಂದು ನವದೆಹಲಿಯ ಸಂಸತ್ ಭವನದಲ್ಲಿ ಆರ್ಥಿಕ ಸ್ಥಾಯಿ ಸಮಿತಿಯ ಅಧ್ಯಕ್ಷ ದೋಲಾ ಸೇನ್ ಅಧ್ಯಕ್ಷತೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ಭಾಗವಹಿಸಿದ ಶ್ರೇಯಸ್, ಹಾಸನ ಲೋಕಸಭಾ ಕ್ಷೇತ್ರದ ಪ್ರಮುಖ ಸಮಸ್ಯೆಗಳಾದ ಕಾಫಿ, ಕಾಳುಮೆಣಸು, ಏಲಕ್ಕಿ, ಭತ್ತ ಮತ್ತಿತರ ಬೆಳೆಗಾರರ ಸಮಸ್ಯೆಗಳು, ಬೆಳೆ ನಷ್ಟ ಮತ್ತು ಪರಿಹಾರ, ಮಾನವ – ಪ್ರಾಣಿ ಸಂಘರ್ಷ, ಕಾರ್ಮಿಕರ ಶ್ರೇಯೋಭಿವೃದ್ಧಿ, ಮತ್ತಿತರ ಪ್ರಮುಖ ವಿಚಾರಗಳ ಬಗ್ಗೆ ಗಮನ ಸೆಳೆದರು.
ಜಿಲ್ಲೆಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ, ಸ್ಥಾಯಿ ಸಮಿತಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದರು.
ಈಚೆಗೆ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕವಾಗಿರುವ ಅವರು ಸಮಿತಿಯ ಪ್ರಥಮ ಸಭೆಯಲ್ಲಿ ಪಾಲ್ಗೊಂಡರು.