ಹಾಸನ: ಹಾಸನ ನಗರದ ಎಪಿಎಂಸಿ ಮಾರುಕಟ್ಟೆಗೆ ಇಂದು ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ವರ್ತಕರ ಅಹವಾಲುಗಳನ್ನು ಸ್ವೀಕರಿಸಿದ ಸಂಸದರು ಅಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಸೂಚನೆ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿಎಂಸಿ ಮಾರುಕಟ್ಟೆಯಲ್ಲಿ ಜಾಗದ ಸಮಸ್ಯೆ ಹಾಗೂ ಮಳಿಗೆಗಳ ಸಮಸ್ಯೆ ಸೇರಿದಂತೆ ಇರುವ ಹಲವು ಸಮಸ್ಯೆಗಳ ಬಗ್ಗೆ ವರ್ತಕರು ಹೇಳಿಕೊಂಡಿದ್ದಾರೆ, ಶೀಘ್ರವಾಗಿ ಈ ಬಗ್ಗೆ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ ಎಂದರು.
ಮಾರುಕಟ್ಟೆಯಲ್ಲಿ ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದಿಂದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಆಗಮಿಸುತ್ತಾರೆ. ಆದುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಭದ್ರತೆ ಜೊತೆಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.