ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆದ ಕಾರು, ದಂಪತಿ ಸ್ಥಳದಲ್ಲೇ ದುರ್ಮರಣ

ಚನ್ನರಾಯಪಟ್ಟಣ ತಾಲೂಕು ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಘಟನೆ

ಹಾಸನ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ದಂಪತಿ ದುರ್ಮರಣ ಹೊಂದಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ, ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ದಂಡಿಗನಹಳ್ಳಿ ಹೋಬಳಿ ಅಗ್ರಹಾರ ಕೊಪ್ಪಲಿನ ಚಂದ್ರೇಗೌಡ (52) ಹೇಮಲತಾ (45) ಮೃತ ದುರ್ದೈವಿಗಳು.

ಉದಯಪುರದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ಗೆ ತಿರುವಿನಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತ ಎಸಗಿದ ಕಾರು

ಇದರಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದರು.

ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.