ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರಿನ ಸಿಐಡಿ ಡಿವೈಎಸ್ಪಿ ಮೊಹಮದ್ ರಫಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕಟ್ಟಾಯ-ಗೊರೂರು ಸಮೀಪ ನಡೆದಿದೆ.
ಗಾಯಾಳು ಮೊಹಮ್ಮದ್ ರಫಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ಅವರು ಹಾಸನದಿಂದ ಅರಕಲಗೂಡು ಕಡೆಗೆ ಪ್ರಯಾಣಿಸುತ್ತಿದ್ದ ಮಾರುತಿ ಎರ್ಟಿಗಾ ಕಾರಿಗೆ ಎದುರಿನಿಂದ ಬಂದ ಇನ್ನೊವಾ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಎರಡೂ ಕಾರುಗಳು ನುಜ್ಜುಗುಜ್ಜಾವೆ. ಗೊರೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.