ಹಾಸನ: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶಕ್ಕೆ ದಿನಗಣನೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೆಂಪಲ್ ರನ್ ಆರಂಭಿಸಿದ್ದು, ಇಂದು ತಮ್ಮ ಕುಟುಂಬ ಶ್ರದ್ಧೆಯಿಂದ ನಡೆದುಕೊಳ್ಳುವ ದೇವಾಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಪತ್ನಿ ರೇವತಿ, ಪುತ್ರ ಅವ್ಯಾನ್ ಜತೆ ಚನ್ನರಾಯಪಟ್ಟಣ ತಾಲ್ಲೂಕಿನ ಯಲಿಯೂರು ಗ್ರಾಮದ ದೇವಿರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಹೊಳೆನರಸೀಪುರ ತಾಲ್ಲೂಕಿನ ದೇವೇಗೌಡರ ಹುಟ್ಟೂರು ಹರದನಹಳ್ಳಿಯ ದೇವೇಶ್ವರ ದೇಗುಲಕ್ಕೆ ಭೇಟಿ ನೀಡಿ ಮನೆ ದೇವರಿಗೆ ಪೂಜೆ ಸಲ್ಲಿಸಿದರು. ಅವರೊಂದಿಗೆ ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಇದ್ದಾರೆ.