ಹಾಸನ: ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಕುಡಿಯುವ ನೀರು ತರಲು ದ್ವಿ ಚಕ್ರ ವಾಹನದಲ್ಲಿ ಹೊರಟಿದ್ದ ಆತನನ್ನು ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿದ ಇಬ್ಬರು ದುಷ್ಕರ್ಮಿಗಳ ಮಾರಕಾಸ್ತ್ರಗಳ ದಾಳಿಯಿಂದ ರವಿ ಸ್ಥಳದಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದನು.