ಹಾಸನ: ಕೆರೆಕೋಡಿ ದುರಸ್ತಿ ಮಾಡುವಾಗ ಮಣ್ಣು ಕುಸಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೇಲೂರು ತಾಲ್ಲೂಕಿನ, ಹನಿಕೆ ಗ್ರಾಮದ ಬಳಿ ನಡೆದಿದೆ.
ಹೊಳೆನರಸೀಪುರದ ದರ್ಶನ್‌ಕುಮಾರ್ (29) ಮೃತ ಯುವಕ. ವಸಂತ್‌ಕುಮಾರ್ ಹಾಗೂ ಲೋಕಪ್ಪ ಗಂಭೀರವಾಗಿ ಗಾಯಗೊಂಡಿದ್ದು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಕೆರೆಯ ಕೋಡಿ ದುರಸ್ತಿ ಮಾಡುವಾಗ ದಿಢೀರ್ ಭಾರಿ ಪ್ರಮಾಣದ ಮಣ್ಣು ಕುಸಿದಿದೆ. ಮಣ್ಣಿನಡಿ ಸಿಲುಕಿ ದರ್ಶನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರು. ಉಳಿದಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೇಲೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.