ಪೊಲೀಸರ ಮೇಲೆಯೇ ಹಲ್ಲೆ: ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಬಂಧನ

ಚಿತ್ರದುರ್ಗ: ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರ ಠಾಣೆ ಪಿಎಸ್​ಐ ಗಾದಿಲಿಂಗಪ್ಪ ಮೇಲೆ ಹನುಮಂತೇಗೌಡ ನಗರದ ತುರುವನೂರು ರಸ್ತೆಯಲ್ಲಿ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಪಿಎಸ್​ಐ ಗಾದಿಲಿಂಗಪ್ಪ ಅವರ ಕೈ ಬೆರಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ರಸ್ತೆ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದನ್ನು ಪಿಎಸ್​ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಗಾದಿಲಿಂಗಪ್ಪ ಅವರ ಮೇಲೆ ಹಲ್ಲೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬಂಧನವಾಗುತ್ತಿದ್ದಂತೆ ಪೊಲೀಸರಿಂದಲೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಹನುಮಂತೇಗೌಡ ಪ್ರತಿ ಆರೋಪ ಮಾಡಿದ್ದಾರೆ. ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.