ಹಾಸನ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ರಖಿತಾ ಅಲಿಯಾಸ್ ಗಾಂಜಾ ಗುಂಡನನ್ನು ಹತ್ಯೆ ಮಾಡಿದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭರತ್, ದರ್ಶನ್, ರಂಜನ್, ಮಹೇಶ್ ಬಂಧಿತ ಆರೋಪಿಗಳು.
ನ.13 ರಂದು ನಗರದ ಚನ್ನಪಟ್ಟಣದಲ್ಲಿ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಜಗಳದ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ರಖಿತಾ ಆಲಿಯಾಸ್ ಗಾಂಜಾ ಗುಂಡನನ್ನು (34) ಕೊಲೆ ಮಾಡಿದ್ದ ಆರೋಪಿಗಳು ಪರಾರಿಯಾಗಿದ್ದರು.
ಹಾಸನ ನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.