ಹಾಸನ: ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ನಗರ ತಾಲ್ಲೂಕಿನ ಭೇರ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಇನ್ಸ್‌ಪೆಕ್ಟರ್ ಗಂಗಾಧರ್, ಕಾನ್ಸ್‌ಟೇಬಲ್‌ಗಳಾದ ರಾಕೇಶ್, ಸೋಮಶೇಖರ್ ಅವರ ತಂಡ ಬಂಧಿಸಿ ಕರೆತಂದು ವಿಚಾರಣೆ ಆರಂಭಿಸಿದ್ದಾರೆ.
ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಗಾನವಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಮೋಹಿತ್ ಪರಾರಿಯಾಗಿದ್ದ.
ಗಂಭೀರವಾಗಿ ಗಾಯಗೊಂಡಿರುವ ಯುವತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.