ಹಾಸನ: ಜಿಲ್ಲೆಯ ವಿವಿಧೆಡೆ ವರುಣಾರ್ಭಟ ಜೋರಾಗಿದ್ದು ಜನಜೀವನ ಅಸ್ರವ್ಯಸ್ತಗೊಂಡಿದೆ.
ಸಕಲೇಶಪುರ, ಆಲೂರು, ಹಾಸನ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನ ಸಂಚಾರಕ್ಕೆ ಅಡ್ಡಿಯಾಗಿದೆ. ವಾಹನ ಸವಾರರು, ಮಾರ್ಗಮಧ್ಯ ಸಿಲುಕಿರುವವರು ಪರದಾಡುತ್ತಿದ್ದಾರೆ.
ಬಿರುಗಾಳಿ, ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಮಳೆಯಿಂದ ಜನರು ಕಂಗಲಾಗಿದ್ದಾರೆ. ಜಿಲ್ಲೆಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದ್ದು ಸುರಕ್ಷಿತ ಸ್ಥಳಗಳಲ್ಲಿರುವಂತೆ ಸೂಚಿಸಿದೆ.
ಭಾರಿ ಮಳೆ ಮಲೆನಾಡು ಭಾಗದ ಕಾಫಿ ಬೆಳೆಗಾರರು ಬೆಳೆನಷ್ಟದ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದರೆ, ಅರೆಮಲೆನಾಡು ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಹವಾಮಾನ ಇಲಾಖೆ ಇನ್ನೂ ಮೂರ್ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ನವರಾತ್ರಿ ಆಚರಣೆಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದೆ.