ಹಾಸನ; ಪ್ರತಿಕೋದ್ಯಮದಲ್ಲಿನ ಸಾಧನೆಗಾಗಿ ಹಲೋ ಹಾಸನ್ ದಿನಪತ್ರಿಕೆ ಸಂಪಾದಕ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿನಾಕಲಗೂಡು ಅವರಿಗೆ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್ ನೀಡಿದ ನ್ಯಾಷನಲ್ ಗ್ರೀನರಿ ಅವಾರ್ಡ್ ಅನ್ನು ಇಂದು ಪ್ರದಾನ ಮಾಡಲಾಯಿತು.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೃಹಸಚಿವ ಜಿ.ಪರಮೇಶ್ವರ್, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ರವಿ ನಾಕಲಗೂಡು ಅವರು ಮೂರು ದಶಕಗಳಿಂದ ಜಿಲ್ಲೆಯಲ್ಲಿ ಪತ್ರಿಕೋದ್ಯಮದ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.