ಶತ್ರುಭೈರವಿ ಯಾಗ ಹೇಳಿಕೆಗೂ ಮಡಿಕೇರಿಯಲ್ಲಿರುವ ಕುಮಾರಸ್ವಾಮಿ ಅವರಿಗೂ ಸಂಬಂಧವಿಲ್ಲ: ಜಿ.ಟಿ.ದೇವೇಗೌಡ

ಈ ಯಾಗ, ಪೂಜೆಗಳ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ಚೆನ್ನಾಗಿ ಗೊತ್ತಿದೆ

ಹಾಸನ: ತಮ್ಮ ಮೇಲೆ ಶತ್ರು ಭೈರವಿ ಯಾಗ ಪ್ರಯೋಗಿಸಲಾಗುತ್ತಿದೆ ಎಂಬ ಡಿಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ‌ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಡಿಕೇರಿಯಲ್ಲಿದ್ದಾರೆ. ಅವರಿಗೂ ಅದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಯಾಗ, ಪೂಜೆಗಳ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರೇ ಅದು ಏನೆಂದು ಹೇಳಬೇಕು. ಕುಮಾರಸ್ವಾಮಿ ಅವರು ಯಾವತ್ತೂ ಕೂಡ ಆ ರೀತಿ ಮಾಡಲ್ಲ ಎಂದರು.