ಚನ್ನಪಟ್ಟಣದಿಂದ ಡಿಕೆಶಿ ಸ್ಪರ್ಧೆ ಸಾಧ್ಯತೆ ಫಿಫ್ಟಿ-ಫಿಫ್ಟಿ ಎಂದ ಸಚಿವ ರಾಜಣ್ಣ

ಹಾಸನ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಫಿಫ್ಟಿ : ಫಿಫ್ಟಿ ಎಂದು‌ ಚುಟುಕಾಗಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡಬೇಕು ಅಂತನೂ ಇದ್ದಾರೆ. ಸ್ಪರ್ಧೆ ಮಾಡಬಾರದು ಅಂತನೂ ಇದ್ದಾರೆ ಎಂದು ಅಡ್ಡಗೋಡೆ‌‌ ಮೇಲೆ ದೀಪವಿಟ್ಟರು.

ಚನ್ನಪಟ್ಟಣದಿಂದ ಡಿಕೆಶಿ ಸ್ಪರ್ಧೆ ಬಗ್ಗೆ ಬಿರುಸಿಮ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ರಾಜಣ್ಣ ಹೇಳಿಕೆ ಕುತೂಹಲ ಮೂಡಿಸಿದೆ.