ಹಾಸನ: ನಗರದ ಸ್ಕಾಲರ್ಸ್ ಇಂಟರ್ ನ್ಯಾಷನಲ್ ಶಾಲೆ ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ(ಕುಸುಮ)ದ ಉತ್ತಮ ಶಾಲಾ ಆಡಳಿತ ಮಂಡಳಿ ಪ್ರಶಸ್ತಿಗೆ ಪಾತ್ರವಾಗಿದೆ.
ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಲೆಯ ಆಡಳಿತಾಧಿಕಾರಿ ಡಾ.ಎಚ್.ಎನ್.ಚಂದ್ರಶೇಖರ್ ಅವರಿಗೆ ಕುಸುಮ (KUSMA) ಸಂಘಟನೆಯ ಜಂಟಿ ಖಜಾಂಚಿ ಡಾ.ಉಮಾಮೂರ್ತಿ ರಾವ್ ಪ್ರಶಸ್ತಿ ಪ್ರದಾನ ಮಾಡಿದರು.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಡಾ.ಸಂತೋಷ್ ಹೆಗಡೆ, ಡಿಐಜಿ ರವಿ ಡಿ.ಚನ್ನಣ್ಣನವರ್, ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಕಮಿಷನರ್ ಪಿಜಿಆರ್ ಸಿಂಧ್ಯಾ ಮುಂತಾವದರು ಅತಿಥಿಗಳಾಗಿ ಭಾಗವಹಿಸಿದ್ದರು.