ಹಾಸನ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾಗಿ ನಾಡಸಹ್ಯಾದ್ರಿ ಪ್ರಾದೇಶಿಕ ಪತ್ರಿಕೆ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ಬಾಳ್ಳುಗೋಪಾಲ್ ನೇಮಕಗೊಂಡಿದ್ದಾರೆ.
ಈ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಬಾಳ್ಳುಗೋಪಾಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಗೋಪಾಲ್ ಅವರು ರಾಜ್ಯ ಕಾರ್ಯಕಾರಿ ಸಮಿತಿ ಸಭೆಗಳ ವಿಶೇಷ ಆಹ್ವಾನಿತರಾಗಿ ಸಂಘದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ.