ಬೆಂಗಳೂರು; ಪುಟ್ಟಣಚೆಟ್ಟಿ ಪುರಭವನದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು ಮತ್ತು ದಿ ನ್ಯೂಸ್ ಪೇಪರ್ ಅಸೋಶಿಯನ್ ಅಧ್ಯಕ್ಷ ಶ್ರಾವಣ್ ಲಕ್ಷ್ಮಣ ಅವರು ಉಪಸ್ಥಿತರಿದ್ದರು.