ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ; ನಾಯಕರ ಒಗ್ಗಟ್ಟು ಪ್ರದರ್ಶನ

ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಇಂದು ನಾಮಪತ್ರ ಸಲ್ಲಿಸಿದರು.

ಗೃಹಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಬಿ.ಶಿವರಾಮುಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮ ನಾಮಪತ್ರ ಸ್ವೀಕರಿಸಿದರು. ನಂತರ ನಿಗದಿಯಂತೆ ಬೃಹತ್ ರೋಡ್ ಶೋ ನಡೆಸಲು ಅಭ್ಯರ್ಥಿ ಹಾಗೂ ಮುಖಂಡರು ಸಾವಿರಾರು ಕಾರ್ಯಕರ್ತರೊಂದಿಗೆ ಡೇರಿ ವೃತ್ತದೆಡೆಗೆ ತೆರಳಿದರು.

ನಗರದ ಡೇರಿ ವೃತ್ತದಿಂದ ಆರಂಭವಾಗಲಿರುವ ಮೆರವಣಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಮುಕ್ತಾಯವಾಗಲಿದೆ.

ಮೆರವಣಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗುವರು.