ಹಾಸನ: ನವದೆಹಲಿಯಲ್ಲಿ ಗುರುವಾರ ನಡೆದ ಎಐಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರ ಹೆಸರು ಅಂತಿಮಗೊಳಿಸಲಾಗಿದೆ.
ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಸಭೆಯಲ್ಲಿ ಹಾಸನ ಕ್ಷೇತ್ರಕ್ಕೆ ಶ್ರೇಯಸ್ ಅವರ ಹೆಸರಿನ ಶಿಫಾರಸ್ಸನ್ನು ಸಭೆ ಅನುಮೋದಿಸಿದೆ.
ಪಕ್ಷದ ಶಿಷ್ಟಾಚಾರದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಅಧ್ಯಕ್ಷರ ಸಹಿಗೆ ರವಾನಿಸಲಾಗಿದ್ದು, ಶೀಘ್ರವೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆ ಇದೆ.