ಸಂತ್ರಸ್ತನ ವೈದ್ಯಕೀಯ ವರದಿಯ ನಿರೀಕ್ಷೆಯಲ್ಲಿ ಪೊಲೀಸರು; ಸೂರಜ್ ಬಂಧನ ಸಾಧ್ಯತೆ

ಮುಂಜಾನೆವರೆಗೂ ಮುಂದುವರಿದ ವಿಚಾರಣೆ

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ವಿಚಾರಣೆ ನಡೆಸಿರುವ ಪೊಲೀಸರು ಸಂತ್ರಸ್ತನ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆಯಿದೆ.

ನಿನ್ನೆ ರಾತ್ರಿ 7.30 ರ ಸಮಯದಲ್ಲಿ ಸಿಇಎನ್ ಪೊಲೀಸ್ ಠಾಣೆಗೆ ಡಾ.ಸೂರಜ್‌ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಪೊಲೀಸ್ ಠಾಣೆಗೆ ಹಾಸನ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು. ಮತ್ತೊಂದೆಡೆ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರುವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ವರದಿ ದೊರಕಿದ ನಂತರ ಅವರನ್ನು ಬಂಧಿಸುವ ಸಾಧ್ಯತೆ ಇದೆ.