ಸಕಲೇಶಪುರ: ತಾಲ್ಲೂಕಿನ ಹಾನುಬಾಳು ಹೋಬಳಿ ಮರಗುಂದ ಗ್ರಾಮದ ಅರಣ್ಯ ಪ್ರದೇಶದಲ್ಲಿ ಆನೆ ಕಳೇಬರ ಪತ್ತೆಯಾಗಿದ್ದು ಕಾದಾಟದಲ್ಲಿ ಮೃತಪಟ್ಟಿದೆ ಎನ್ನಲಾಗಿದೆ.
ಐದಾರು ದಿನಗಳ ಹಿಂದೆ ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕಲ್ಲು ಬಂಡೆಯ ನಡುವೆ ಆನೆ ಮಲಗಿದ ಸ್ಥಿತಿಯಲ್ಲೇ ಪ್ರಾಣ ಬಿಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.