ಶ್ರೇಯಸ್ ಪರ ಪ್ರಚಾರಕ್ಕೆ ಶೀಘ್ರವೇ ಬರಲಿದ್ದಾರೆ ಸಿಎಂ, ಡಿಸಿಎಂ; ಕೆ.ಎಂ.ಶಿವಲಿಂಗೇಗೌಡ

ವಿಧಾನಸಭಾ ಚುನಾವಣೆಯ ವರ್ಚಸ್ಸನ್ನು ಇಟ್ಟುಕೊಂಡು ಈ ಚುನಾವಣೆಯಲ್ಲಿ ಕೆಲಸ ಮಾಡುತ್ತೇವೆ.

ಹಾಸನ: ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಒಮ್ಮತದಿಂದ ಹಾಸನ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದು, ಆಯ್ಕೆ ಸಂತಸ ತಂದಿದೆ ಎಂದು ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ.

ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇತರೆ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ.

ಕಳೆದ ವಿಧಾನಸಭಾ ಚುನಾವಣೆಯ ವರ್ಚಸ್ಸನ್ನು ಇಟ್ಟುಕೊಂಡು ಈ ಚುನಾವಣೆಯಲ್ಲಿ ಕೆಲಸ ಮಾಡುತ್ತೇವೆ. ಹಾಸನ ಜಿಲ್ಲೆಯ ಸಮಸ್ತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಶ್ರಮಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಶ್ರೇಯಸ್‌ಪಟೇಲ್ ಪರ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸದ್ಯದಲ್ಲಿ ಹಾಸನ ಜಿಲ್ಲೆಗೆ ಆಗಮಿಸಲಿದ್ದು, ಶ್ರೇಯಸ್‌ಪಟೇಲ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.