ಹಾಸನ: ವೇಗವಾಗಿಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ್ದರಿಂದ ಕಾರಿನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ತಾಲ್ಲೂಕಿನ ದುದ್ದ ಹೋಬಳಿ ಚೆನ್ನಮ್ಮನಹಳ್ಳಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆ, ಕಿಕ್ಕೇರಿ ಮೂಲದ ಚೇತನ್ ಮತ್ತು ಸಂಗೀತಾ ಗಂಭೀರವಾಗಿ ಗಾಯಗೊಂಡ ದಂಪತಿ. ಇಬ್ಬರನ್ನೂ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ದುದ್ದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಾಹನ ವಶಕ್ಕೆ ಪಡೆದಿದ್ದಾರೆ.