ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯಾಯಾಧೀಶರು ಅವರನ್ನು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.