ಪೆನ್ ಡ್ರೈವ್ ಪ್ರಕರಣ: ನವೀನ್, ಚೇತನ್ ಮೂರು ದಿನ ಎಸ್ಐಟಿ ಕಸ್ಟಡಿಗೆ

ಹಾಸನ: ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನಿನ್ನೆ ಬಂಧಿತರಾಗಿದ್ದ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಅವರನ್ನು ಮೂರು ದಿನ ಎಸ್ಐಟಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಜೂನ್ 1 ರ ಶನಿವಾರ ಸಂಜೆ 4.30 ಕ್ಕೆ ಕೋರ್ಟ್‌ಗೆ ಹಾಜರುಪಡಿಸುವಂತೆ ಹಾಸನದ ಎರಡನೇ ಅಧಿಕ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ಆದೇಶ ನೀಡಿದೆ.

ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ ಎಂದು ಎಸ್ಐಟಿ ಮನವಿ ಸಲ್ಲಿಸಿತು. ಅದನ್ನು ಪುರಸ್ಕರಿಸಿದ ನ್ಯಾಯಾಲಯದ ಇಂದಿನಿಂದ ಜೂನ್ 1 ರವರೆಗೆ ನವೀನ್ ಹಾಗೂ ಚೇತನ್ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿದೆ.