ಹಾಸನ; ಚಾಲಕನ ನಿಯಂತ್ರಣ ತಪ್ಪಿದ ಸರಕು ತುಂಬಿದ್ದ ಲಾರಿಯೊಂದು ಕಂದಕಕ್ಕೆ ಬಿದ್ದು, ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ರಸ್ತೆಯ ಪಕ್ಕದಲ್ಲೇ ರಭಸವಾಗಿ ನೀರು ಹರಿದು ಬೃಹತ್ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಲಾರಿ ಪಲ್ಟಿಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಲಾರಿಯಲ್ಲಿ ಸಿಲುಕಿಕೊಂಡಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಅತಾವುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.