ಹಾಸನ, ಜನವರಿ 29: ಹಾಸನ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನಗೊಂಡ ಪ್ರದೇಶದಲ್ಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರಂಭವಾಗಿದೆ.
ಬೂವನಹಳ್ಳಿ ಸರ್ವೆ ನಂ. 44ರಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಭೂಸ್ವಾಧೀನ ಭೂಮಿಯಲ್ಲಿನ ಒತ್ತುವರಿ ತೆರವುಗೊಳಿಸಿ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ.
ಇನ್ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಸ್ಥಳದಲ್ಲಿ ಎಸ್ಪಿ ಮಹಮದ್ ಸುಜೇತಾ, ಎಸಿ ಮಾರುತಿ ಹಾಗೂ ತಹಸೀಲ್ದಾರ್ ಶ್ವೇತಾ ಅವರು ಮೊಕ್ಕಾಂ ಹೂಡಿದ್ದಾರೆ.
ಈ ಹಿಂದೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೆಲವರು ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಹಾಸನ ಶಾಸಕ ಎಚ್.ಪಿ. ಸ್ವರೂಪ್‌ಪ್ರಕಾಶ್ ಅವರು ಮಧ್ಯಪ್ರವೇಶಿಸಿ ಜಂಟಿ ಸರ್ವೆ ನಡೆಸುವಂತೆ ಡಿಸಿಗೆ ಸೂಚಿಸಿದ್ದರು.
ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರು ಜಂಟಿ ಸರ್ವೆ ನಡೆಸದೆಯೇ ಇಂದು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದ್ದಾರೆ.