ಹಾಸನ : ಶಿರಾಡಿಘಾಟ್ ರಸ್ತೆ ಎನ್‌ಎಚ್-75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಎಲ್ಪಿಜಿ ಸೋರಿಕೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬಂದ್ ಮಾಡಲಾಗಿದೆ.
ಟ್ಯಾಂಕರ್‌ನಿಂದ ಆಗುತ್ತಿರುವ ಗ್ಯಾಸ್ ಸೋರಿಕೆಯಿಂದ ಅಗ್ನಿ ಅನಾಹುತ ಸಂಭವಿಸುವುದನ್ನು ತಲ್ಪಿಸಲು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಟರ್ನ್ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಟ್ಯಾಂಕರ್ ಪಲ್ಟಿಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸಂಚಾರ ಬಂದ್ ಮಾಡಿದ್ದು, ಚಾಲಕರು ಮಾರ್ಗಮಧ್ಯೆ ವಾಹಗಳನ್ನು ನಿಲ್ಲಿಸಿಕೊಂಡಿದ್ದಾರೆ.
ಬೆಂಗಳೂರು-ಹಾಸನ-ಮಂಗಳೂರು,
ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.