ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಹಾಸನ: ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಮೃತಪಟ್ಟ ಘಟನೆ ನಗರದ ಡೇರಿ ಸರ್ಕಲ್ ಬಳಿ ನಡೆದಿದೆ.

ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ಸೈಕಲ್ ಸವಾರ. ಕಾಟೀಹಳ್ಳಿ ಕಡೆಯಿಂದ ಬಂದು ತಿರುವಿನಲ್ಲಿ ಸೈಕಲ್‌ಗೆ
KA-13-Z-5180 ನಂಬರ್‌ನ ವೆನ್ಯೂ ಕಾರು ಡಿಕ್ಕಿ ಹೊಡೆಯಿತು.

ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರು. ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.